ತುಮಕೂರು: ‘ಮುಂದಿನ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾನು ಸಹಕಾರ ಸಚಿವನಾಗಿ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದು ಕೂಡ ನಿಶ್ಚಿತ.’
ಹೀಗೆಂದು ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮಧುಗಿರಿಯ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ನಾನು ಸಹಕಾರ ಸಚಿವನಾಗಿ ರೈತರ ಸಾಲಮನ್ನಾ ಮಾಡುತ್ತೇನೆ ಎಂದು ವಿಶ್ವಾಸವ್ಯಕ್ತಪಡಿಸಿದ್ದಾರೆ.
ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಿದ್ದು, ಆ ಕಾರ್ಯಕ್ರಮಗಳೇ ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ವರದಾನವಾಗುತ್ತದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜಾರಿಗೆ ತಂದಿದ್ದ ಅನೇಕ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ಮತದಾರರಿಗೆ ತಿಳಿಸಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಉತ್ತಮ ಅಭ್ಯರ್ಥಿಗಳು ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.