
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಸುದ್ದಿ ಮತ್ತೆ ಭಾರಿ ಚರ್ಚೆಗೆ ಕಾರಣವಾಗಿದೆ. ಪ್ರಭಾವಿ ಸಚಿವರೊಬ್ಬರಮೇಲೆ ಹನಿಟ್ರ್ಯಾಪ್ ಷಡ್ಯಂತ್ರ ನಡೆದಿದೆ ಎಂಬ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಬಹಿರಂಗಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಶಾಸಕ ಯತ್ನಾಳ್, ಸಹಕಾರ ಸಚಿವರ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಬಾಂಬ್ ಸಿಡಿಸಿದ್ದಾರೆ. ಈ ವೇಳೆ ಯತ್ನಾಳ್ ಹೇಳಿಕೆಗೆ ಸ್ಪಷ್ಟೀಕರಣ ನೀಡುತ್ತೇನೆ ಎಂದು ಮಾತು ಪ್ರಾರಂಭಿಸಿದ ಸಚಿವ ಕೆ.ಎನ್.ರಾಜಣ್ಣ, ಕರ್ನಾಟಕ ಸಿಡಿ ಫ್ಯಾಕ್ಟರಿಯಾಗಿದೆ ಎಂಬ ಮಾತು ಕೇಳಿಬರುತ್ತಿದೆ. 48 ಜನರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನಲಾಗುತ್ತಿದೆ. ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಹೇಳಿದರು.
ಕಳೆದ 6 ತಿಂಗಳಿಂದ ನನ್ನ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ. ನನ್ನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಲು ಷಡ್ಯಂತ್ರ ಮಾಡುತ್ತಿದ್ದಾರೆ. ಇದರ ಹಿಂದೆ ದೊಡ್ಡ ಜಾಲವೇ ಇದೆ. ಹನಿಟ್ರ್ಯಾಪ್ ಜಾಲದ ಹಿಂದೆ ಇರುವವರು ಯಾರು? ಏನು ಎಂಬುದು ತನಿಖೆಯಾಗಬೇಕು ಎಂದು ಹೇಳಿದರು.