
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎನ್.ರಾಜಣ್ಣ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿಜೆಪಿ ಶಾಸಕ ಮುನಿರತ್ನ ಆಗ್ರಹಕ್ಕೆ ತಿರುಗೇಟು ನೀಡಿರುವ ಸಚಿವ ರಾಜಣ್ಣ, ಮೊದಲು ಮುನಿರತ್ನ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲಿ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಮುನಿರತ್ನ ಏನು ಹೇಳಿದ್ದಾರೆ ಗೊತ್ತಿಲ್ಲ. ಆದರೆ ಮೊದಲು ಮುನಿರತ್ನ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಇದ್ದವರು. ಈಗ ಅವರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಹಾಗಾಗಿ ಮೊದಲು ಮುನಿರತ್ನ ಅವರನ್ನೇ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.
ಇನ್ನು ಹನಿಟ್ರ್ಯಾಪ್ ಪ್ರಕರಣದ ಬಗ್ಗೆ ದೂರು ನೀಡುವ ಕುರಿತಾಗಿ ಪ್ರತಿಕ್ರಿಯಿಸಿದ ಸಚಿವರು, ಸೂಕ್ತ ಸಮಯದಲ್ಲಿ ದೂರು ನೀಡಲಾಗುವುದು ಎಂದು ಹೇಳಿದರು.