ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬದಲಾವಣೆಗೆ ಸಚಿವ ಕೆ.ಎನ್.ರಾಜಣ್ಣ ಪರೋಕ್ಷವಾಗಿ ಒತ್ತಾಯಿಸಿದ್ದಾರೆ. ಲಿಂಗಾಯಿತ ನಾಯಕರು ಅಧ್ಯಕ್ಷ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪೇನಿಲ್ಲ. ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಜಣ್ಣ, ಎಲ್ಲಾ ಸಮುದಾಯದವರೂ ಕೆಪಿಸಿಸಿ ಅಧ್ಯಕ್ಷರಾಗಲು ಅರ್ಹರು. ಲಿಂಗಾಯಿತ ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿದ್ದರಲ್ಲಿ ತಪ್ಪೇನಿಲ್ಲ ಎಂದರು.
ಸಿದ್ದರಾಮಯ್ಯರನ್ನು ಸಿಎಂ ಮಾಡುವಾಗ ಹೈಕಮಾಂಡ್ ನವರು ಏನೆಂದು ಹೇಳಿದ್ದರು? ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಎಂದು ಹೇಳಿದ್ದರು. ಅಲ್ಲದೇ ಡಿ.ಕೆ.ಶಿವಕುಮಾರ್ ಲೋಕಸಭೆ ಚುನಾವಣೆ ಮುಗಿಯುವವರೆಗೆ ಅಧ್ಯಕ್ಷರಾಗಿರುತ್ತಾರೆ ಎಂದು ಹೇಳಿದ್ದರು. ಇದನ್ನು ನಾನು ಹೈಕಮಾಂಡ್ ಗೆ ನೆನಪು ಮಾಡಿಕೊಡಲು ಇಚ್ಛಿಸುತ್ತೇನೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಪರೋಕ್ಷವಾಗಿ ಒತ್ತಾಯಿಸಿದ್ದಾರೆ.