ಬಾಗಲಕೋಟೆ: ಡಿಸಿಎಂ ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಡಿಸಿಎಂ ಹುದ್ದೆ ವಿಚಾರ ಚರ್ಚೆಗೆ ಬಂದಿದೆ. ಸಚಿವ ಕೆ.ಎನ್.ರಾಜಣ್ಣ ಡಿಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಇದೀಗ ಈ ಬಗ್ಗೆ ಸ್ವತಃ ಸಚಿವ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎನ್.ರಾಜಣ್ಣ, ನಾನು ಡಿಸಿಎಂ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ನಾನು ಡಿಸಿಎಂ ಹುದ್ದೆ ಆಕಾಂಕ್ಷಿಯಲ್ಲ, ಇನ್ಮುಂದೆ ಯಾವ ಚುನಾವಣೆಯಲ್ಲಿಯೂ ಸ್ಪರ್ಧಿಸುವುದೂ ಇಲ್ಲ ಎಂದು ಹೇಳಿದ್ದಾರೆ. ಈ ಮೂಲಕ ರಾಜಕೀಯ ನಿವೃತ್ತಿಯ ಮಾತನಾಡಿದ್ದಾರೆ ಕೆ.ಎನ್.ರಾಜಣ್ಣ.