ಬೆಂಗಳೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರೇ ವರಿಷ್ಠರಿಗೆ ದೂರು ನೀಡಿರುವ ಆರೋಪ ಕೇಳಿಬಂದಿದೆ.
ಸಚಿವರಾದ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಹತ್ತು ಕಾರ್ಯಕರ್ತರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರಿಗೆ ಮನವಿ ಮಾಡಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಅನಗತ್ಯವಾಗಿ ಪದೇ ಪದೇ ಡಿಸಿಎಂ ವಿಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಹಲವು ಬಾರಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೇ ಸಚಿವ ಡಿನ್ನರ್ ಮೀಟಿಂಗ್ ತಪ್ಪು ಸಂದೇಶ ರವಾನಿಸುತ್ತಿದೆ. ಹಾಗಾಗಿ ರಾಜಣ್ಣ ಅವರನ್ನು ಸಂಪುಟದಿಂದ ತೆಗೆದುಹಕಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗಳೂ ಕೂಡ ಪಕ್ಷಕ್ಕೆ ಡ್ಯಾಮೇಜ್ ಮಾಡುತ್ತಿವೆ ಎಂದು ಕಾರ್ಯಕರ್ತರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.