
ಬೆಂಗಳೂರು: ನನ್ನ ಹಾಗೂ ನನ್ನ ತಂದೆ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿರುವುದು ನಿಜ ಎಂದು ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ ರಾಜಣ್ಣ, ನನಗೆ ಹಾಗೂ ನನ್ನ ತಂದೆ ಇಬ್ಬರಿಗೂ ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ. ನನಗೆ ಈಗಲೂ ಕರೆಗಳು ಬರುತ್ತಿವೆ. ಈ ಬಗ್ಗೆ ನಾನು ದೂರು ನೀಡುತ್ತೇನೆ ಎಂದು ತಿಳಿಸಿದರು.
ನನ್ನ ತಂದೆ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಯತ್ನ ನಡೆದಿದೆ. ಈ ಬಗ್ಗೆ ಹೈಕಮಾಂಡ್ ಗೂ ದೂರು ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವರಿಗೂ ದೂರು ಕೊಡುತ್ತೇವೆ. ಆದಷ್ಟು ಬೇಗ ತನಿಖೆ ನಡೆದರೆ ಒಳ್ಳೆಯದು ಎಂದರು.
ಯಾವ ಪಕ್ಷದವರು ಷಡ್ಯಂತ್ರ ನಡೆಸಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗುತ್ತದೆ. ಯಾರೇ ಕೃತ್ಯವೆಸಗಿದರೂ ಪಕ್ಷಾತೀತವಾಗಿ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.
ಇದೇ ವೇಳೆ ರಾಜೇಂದ್ರ ರಾಜಣ್ಣ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ.