alex Certify ಒಕ್ಕಲಿಗರ ಬಗ್ಗೆ ಹೇಳಿಕೆ ನೀಡಿದ ಭಗವಾನ್ ಗೆ ಶಾಕ್: ದಸರಾ ಯುವ ಕವಿಗೋಷ್ಠಿಯಿಂದ ಕೊಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಕ್ಕಲಿಗರ ಬಗ್ಗೆ ಹೇಳಿಕೆ ನೀಡಿದ ಭಗವಾನ್ ಗೆ ಶಾಕ್: ದಸರಾ ಯುವ ಕವಿಗೋಷ್ಠಿಯಿಂದ ಕೊಕ್

ಮೈಸೂರು: ಒಕ್ಕಲಿಗರ ಬಗ್ಗೆ ಪ್ರೊ. ಕೆ.ಎಸ್. ಭಗವಾನ್ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಅವರಿಗೆ ಕೊಕ್ ನೀಡಲಾಗಿದೆ.

ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದು ಬದಲಾವಣೆ ಮಾಡಲಾಗಿದೆ. ನಾಳೆ ಪ್ರತಿಭಟನೆ ಮಾಡುವುದಾಗಿ ರಾಜ್ಯ ಒಕ್ಕಲಿಗರ ಪಡೆ ಎಚ್ಚರಿಕೆ ನೀಡಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಳಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದು, ಪ್ರೊ. ಭಗವಾನ್ ಬದಲಿಗೆ ಸಾಹಿತಿ ಡಾ. ಡಿ.ಕೆ. ರಾಜೇಂದ್ರ ಅವರು ದಸರಾ ಕವಿ ಗೋಷ್ಠಿ ಉದ್ಘಾಟಿಸಲಿದ್ದಾರೆ.

ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆಗೆ ಮಣಿದು ಯುವ ಕವಿಗೋಷ್ಠಿ ಉದ್ಘಾಟನೆಗೆ ಕೆ.ಎಸ್. ಭಗವಾನ್ ಬದಲು ಡಾ. ಡಿ.ಕೆ. ರಾಜೇಂದ್ರ ಅವರಿಂದ ಉದ್ಘಾಟನೆ ಮಾಡಿಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...