alex Certify BIG NEWS: ಅವಾಚ್ಯ ಪದ ಬಳಕೆ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅವಾಚ್ಯ ಪದ ಬಳಕೆ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೆಪಿಸಿಸಿ ಪ್ರಚಾರ ಸಮಿತಿಯಿಂದ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಲಾಗಿದೆ.

ಕೂಡಲೇ ಎಫ್ಐಆರ್ ದಾಖಲಿಸಿ ಈಶ್ವರಪ್ಪನವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಒಂದೆಕ್ಕೆರಡು ತೆಗೆಯಿರಿ ಎಂದು ಸಚಿವ ಈಶ್ವರಪ್ಪ ನೀಡಿದ ಹೇಳಿಕೆ ಟೀಕಿಸಿದ್ದ ಕಾಂಗ್ರೆಸ್ ನಾಯಕರು, ಈಶ್ವರಪ್ಪ ತಮ್ಮ ಹೆಸರನ್ನು ಮೇರಾ ನಾಮ್ ಜೋಕರ್ ಎಂದು ಬದಲಿಸಿಕೊಳ್ಳಲಿ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಈಶ್ವರಪ್ಪ ಅವಾಚ್ಯ ಪದ ಬಳಕೆ ಮಾಡಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕೆಪಿಸಿಸಿ ಪ್ರಚಾರ ಸಮಿತಿಯಿಂದ ಈಶ್ವರಪ್ಪ ವಿರುದ್ಧ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...