
ಶಿವಮೊಗ್ಗ: ಬಿಜೆಪಿ ವಿರುದ್ಧ ಸೆಡ್ಡೆಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೋಗದಿಂದ ಚಿಹ್ನೆ ನೀಡಲಾಗಿದೆ.
ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದೆ. ದಶಕಗಳ ಕಾಲ ಕಮಲದ ಗುರುತಿನ ಮೂಲಕ ಸ್ಪರ್ಧಿಸುತ್ತಿದ್ದ ಕೆ.ಎಸ್.ಈಶ್ವರಪ್ಪ ಇದೇ ಮೊದಲಬಾರಿಗೆ ‘ಕಬ್ಬಿನ ಜೊತೆ ಇರುವ ರೈತ’ನ ಗುರುತಿನಡಿ ಸ್ಪರ್ಧಿಸಲಿದ್ದಾರೆ.
ಪುತ್ರ ಕಾಂತೇಶ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣಕ್ಕೆ ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.