
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಈ ಬಗ್ಗೆ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ತಯಾರಿದೆ. ಆದರೆ, ಕೊರೊನಾ ಸೋಂಕು ಹೆಚ್ಚಾಗಿರುವ ಕಾರಣ ಚುನಾವಣೆ ಮುಂದೂಡಲು ತೀರ್ಮಾನಿಸಲಾಗಿದ್ದು, ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಂಡು ಚುನಾವಣಾ ಆಯೋಗಕ್ಕೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಅವಧಿ ಮುಕ್ತಾಯಗೊಂಡ ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಿಗೆ ಆಡಳಿತ ಅಧಿಕಾರಿಗಳನ್ನು ನೇಮಿಸುವ ಕುರಿತು ಚಿಂತನೆ ನಡೆದಿದೆ ಎನ್ನಲಾಗಿದೆ.