alex Certify ಕೆ.ಎಸ್.ಈಶ್ವರಪ್ಪಗೆ ಹೈಕೋರ್ಟ್ ರಿಲೀಫ್; FIRಗೆ ತಡೆ; ರಾಜಕಾರಣಿಗಳ ಆಕ್ಷೇಪಾರ್ಹ ಹೇಳಿಕೆಗಳಿಗೆ ತರಾಟೆಗೆ ತೆಗೆದುಕೊಂಡ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆ.ಎಸ್.ಈಶ್ವರಪ್ಪಗೆ ಹೈಕೋರ್ಟ್ ರಿಲೀಫ್; FIRಗೆ ತಡೆ; ರಾಜಕಾರಣಿಗಳ ಆಕ್ಷೇಪಾರ್ಹ ಹೇಳಿಕೆಗಳಿಗೆ ತರಾಟೆಗೆ ತೆಗೆದುಕೊಂಡ ಕೋರ್ಟ್

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ ನೀಡಿದೆ.

ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ.ಸುರೇಶ್ ದೇಶ ವಿಭಜನೆ ಮಾತನಾಡಿದ್ದರು. ಡಿ.ಕೆ,ಸುರೇಶ್ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಕೆ.ಎಸ್.ಈಶ್ವರಪ್ಪ, ದೇಶದ್ರೋಹಿ ಹೇಳಿಕೆ ಕೊಡುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ತರಬೇಕು ಎಂದು ಒತ್ತಾಯಿಸಿದ್ದರು.

ಈ ವೇಳೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಈಶ್ವರಪ್ಪ ಹೇಳಿಕೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ಹನುಮಂತಪ್ಪ ಎಂಬುವವರು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದರು. ಅಲ್ಲದೇ ಯಶವಂತಪುರ ಠಾಣೆಯಲ್ಲಿಯೂ ದೂರು ದಾಖಲಾಗಿತ್ತು.

ಪ್ರಕರಣ ಸಂಬಂಧ ಎಫ್ ಐ ಆರ್ ತಡೆ ಕೋರಿ ಈಸ್ವರಪ್ಪ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್ ಏಕಸದಸ್ಯಪೀಠ, ಆಕ್ಷೇಪಾರ್ಯ ಹೇಳಿಕೆಗಳನ್ನು ನೀಡುವ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ರಾಜಕೀಯ ನಾಯಕರು, ಧುರೀಣರು ಉತ್ತಮ ಭಾಷೆಗಳನ್ನು ಯಾಕೆ ಬಳಸುವುದಿಲ್ಲ? ಮಾತಿನಲ್ಲಿ ಸಂಸ್ಕೃತಿಯನ್ನೇಕೆ ಪ್ರತಿಬಿಂಬಿಸುವುದಿಲ್ಲ? ಇಂತಹ ಮಾತುಗಳನ್ನಾಡಿ ಭಾಷೆಯ ಮೇಲೆ ದೌರ್ಜನ್ಯವನ್ನೇಕೆ ಮಾಡುತ್ತಿದ್ದೀರಿ? ಎಂದು ಪ್ರಶ್ನಿಸಿದೆ.

ಭಾಷೆ ಬಳಕೆಯ ಬಗ್ಗೆ ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು. ಜನರು, ಮಕ್ಕಳು ನಮ್ಮನ್ನು ನೋಡುತ್ತಿದ್ದಾರೆ ಎಂಬ ಅರಿವಿರಬೇಕು ಎಂದು ತಾಕೀತು ಮಾಡಿದೆ. ಅಲ್ಲದೇ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ ಐ ಆರ್ ಗೆ ತಡೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...