ಚಿತ್ರದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೂಲಿಯ ದಿನಗಳನ್ನು 150 ದಿನಗಳಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಅವರು ಈ ಕುರಿತು ಮಾಹಿತಿ ನೀಡಿ, ನರೇಗಾ ಯೋಜನೆಯ ಕೂಲಿ ದಿನಗಳನ್ನು 100 ರಿಂದ 150 ದಿನಗಳಿಗೆ ಏರಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಒಬ್ಬ ವ್ಯಕ್ತಿ ಗರಿಷ್ಠ 100 ದಿನಗೂಲಿ ಪಡೆಯಲು ಅವಕಾಶವಿತ್ತು. ಇದನ್ನು 150 ದಿನಗಳಿಗೆ ಏರಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಈ ಕುರಿತಾಗಿ ಆದೇಶ ಹೊರಡಿಸಿದೆ. 100 ದಿನ ಕೆಲಸ ಮಾಡಿದವರು ಹೆಚ್ಚುವರಿಯಾಗಿ 50 ದಿನ ಕೆಲಸ ಮಾಡಲು ಅವಕಾಶವಿದೆ. ರಾಜ್ಯಕ್ಕೆ 800 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಲಭ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.