ಶಿವಮೊಗ್ಗ: ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಇದನ್ನು ಎಲ್ಲಾ ಭಾರತೀಯರು ಸ್ವಾಗತಿಸಬೇಕು ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ದೇವಸ್ಥಾನಗಳನ್ನು ಒಡೆದು ಮಸೀದಿಗಳನ್ನು ನಿರ್ಮಿಸಿದ್ದಾರೆ. ಹಾಗಾಗಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಕೊಟ್ಟಿದ್ದಾರೆ. ಇದೇನು ತಪ್ಪಲ್ಲ ಎಂದು ಹೇಳಿದರು.
ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಂಸದ ಅನಂತ ಕುಮಾರ್ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದಪಳ್ಳಿ ಮಸೀದಿ ನಿರ್ನಾಮ ಮಾಡುತ್ತೇವೆ. ಎಲ್ಲೆಲ್ಲಿ ದೇವಸ್ಥಾನಗಳನ್ನು ಒಡೆದು ಮಸೀದಿ ನಿರ್ಮಿಸಿದ್ದಾರೋ ಅಲ್ಲೆಲ್ಲ ಮಸೀದಿ ನಿರ್ನಾಮ ಮಾಡಿ ದೇವಸ್ಥಾನ ನಿರ್ಮಿಸುತ್ತೇವೆ. ಸಾವಿರಾರು ವರ್ಷಗಳ ಸೇಡು ಇದು ಸೇಡಿಗೆ ಸೇಡು. ಋಣ ತೀರಿಸದಿದ್ದರೆ ಹಿಂದೂ ರಕ್ತ ಎನ್ನಲ್ಲ ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದರು. ಸಂಸದರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಸಂಸದರ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ, ಶ್ರೀರಂಗಪಟ್ಟಣ, ಕಾರವಾರದಲ್ಲಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದಾರೆ. ಹಾಗಾಗಿ ಹೇಳಿದ್ದಾರೆ ಅದರಲ್ಲಿ ತಪ್ಪೇನು? ಇದನ್ನು ಎಲ್ಲಾ ಭಾರತೀಯರು ಸ್ವಗತಿಸಬೇಕು. ನಮ್ಮ ಸಂಸ್ಕೃತಿ ಉಳಿಸಬೇಕು ಎಂದಿದ್ದಾರೆ.