ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದ್ದು, ಮಾರ್ಚ್ 4ರ ಡೆಡ್ ಲೈನ್ ನೀಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಒತ್ತಡ ಹಾಕಿ ಮೀಸಲಾತಿಯನ್ನು ಪಡೆದುಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು. ಈಗ ಶ್ರೀಮಂತರಿಗೆ ಮೀಸಲಾತಿ ಮುಂದುವರೆಯುತ್ತಿದೆ. ಇದು ದುರ್ದೈವ. ಹೀಗೆ ಲಾಭ ಪಡೆದವರಿಗೆ ಮೀಸಲಾತಿ ರದ್ದು ಮಾಡಬೇಕು. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.