alex Certify BIG NEWS: ಒತ್ತಡದಿಂದ ಪಡೆಯಲಾಗಲ್ಲ, ಮೀಸಲಾತಿ ಬಗ್ಗೆ ಸಚಿವ ಈಶ್ವರಪ್ಪ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒತ್ತಡದಿಂದ ಪಡೆಯಲಾಗಲ್ಲ, ಮೀಸಲಾತಿ ಬಗ್ಗೆ ಸಚಿವ ಈಶ್ವರಪ್ಪ ಮಹತ್ವದ ಹೇಳಿಕೆ

ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದ್ದು, ಮಾರ್ಚ್ 4ರ ಡೆಡ್ ಲೈನ್ ನೀಡಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಒತ್ತಡ ಹಾಕಿ ಮೀಸಲಾತಿಯನ್ನು ಪಡೆದುಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಅರ್ಹತೆಗೆ ತಕ್ಕಂತೆ ಮೀಸಲಾತಿ ಸಿಗಬೇಕು. ಈಗ ಶ್ರೀಮಂತರಿಗೆ ಮೀಸಲಾತಿ ಮುಂದುವರೆಯುತ್ತಿದೆ. ಇದು ದುರ್ದೈವ. ಹೀಗೆ ಲಾಭ ಪಡೆದವರಿಗೆ ಮೀಸಲಾತಿ ರದ್ದು ಮಾಡಬೇಕು. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚಿಂತನೆ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...