ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಯು ಟರ್ನ್ ಹೊಡೆದಿದ್ದು, ಚುನಾವಣೆಯವರೆಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಅವರು ಮಾತನಾಡಿ, ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ. ಆದಷ್ಟು ಬೇಗನೆ ಸಚಿವ ಮುರುಗೇಶ್ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆ ಎಂದು ನಿನ್ನೆ ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿತ್ತು.