alex Certify ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆ -ಸೆಟ್ ಪರೀಕ್ಷೆ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ತಾತ್ಕಾಲಿಕ ಅಂಕ ಪ್ರಕಟ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ -ಸೆಟ್ 2023ರಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಗುರುವಾರ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ.

ಪತ್ರಿಕೆ 1 ಮತ್ತು ಪತ್ರಿಕೆ 2ರ ಎಲ್ಲಾ 41 ವಿಷಯಗಳು ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿದ್ದು, https://kar.nic.in ವೆಬ್ಸೈಟ್ ನಲ್ಲಿ ಗಮನಿಸಬಹುದಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಮೇ 10ರೊಳಗೆ keaset2023gmail.com ಇ –ಮೇಲ್ ಮಾಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್. ರಮ್ಯಾ ತಿಳಿಸಿದ್ದಾರೆ.

ಜನವರಿ 13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ ಏಪ್ರಿಲ್ 4ರಂದು ಅಂತಿಮ ಕೀ ಉತ್ತರ ಬಿಡುಗಡೆ ಮಾಡಿದ ಈ ತಾತ್ಕಾಲಿಕ ಅಂಕಪಟ್ಟಿ ಆಧಾರದ ಮೇಲೆ ಅಭ್ಯರ್ಥಿಯು ಕೆ -ಸೆಟ್ ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆ ಸಲ್ಲಿಸಿದ ನಂತರ ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...