ಮೈಸೂರು: ಮುಂದೂಡಲ್ಪಟ್ಟಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ಏಪ್ರಿಲ್ 25 ರಂದು ನಡೆಯಲಿದೆ.
ಮೈಸೂರು ವಿಶ್ವವಿದ್ಯಾಲಯ ಏಪ್ರಿಲ್ 11 ರಂದು ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಕಾರಣಾಂತರದಿಂದ ಪರೀಕ್ಷೆ ಮುಂದೂಡಲಾಗಿತ್ತು. ಏಪ್ರಿಲ್ 25 ರಂದು ಕೆ –ಸೆಟ್ ಪರೀಕ್ಷೆ ನಡೆಯಲಿದೆ. ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಮಹಾನಗರ ಪಾಲಿಕೆ ಆಯುಕ್ತರು, ಸಾರಿಗೆ ಅಧಿಕಾರಿಗಳು ಪರೀಕ್ಷೆ ಸೂತ್ರವಾಗಿ ನಡೆಸಲು ಸಹಕಾರ ನೀಡಬೇಕೆಂದು ಕೆ -ಸೆಟ್ ಸಂಯೋಜನಾಧಿಕಾರಿ ಪ್ರೊ. ರಾಜಶೇಖರ್ ಮನವಿ ಮಾಡಿದ್ದಾರೆ.