ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್ ಪರೀಕ್ಷೆ)ಯನ್ನು ಮತ್ತೆ ಮುಂದೂಡಲಾಗಿದೆ.
ಏಪ್ರಿಲ್ 25 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.
ಕೆ -ಸೆಟ್ ಕೇಂದ್ರದ ಸಂಯೋಜನಾಧಿಕಾರಿ ಪ್ರೊ. ಹೆಚ್. ರಾಜಶೇಖರ್ ಪರೀಕ್ಷೆ ಮುಂದೂಡಿಕೆ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷೆ ನಡೆಸುವ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಹಿಂದೆಯೂ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.