alex Certify ಇಂದು ನಡೆಯಬೇಕಿದ್ದ ಕೆ -ಸೆಟ್ ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ನಡೆಯಬೇಕಿದ್ದ ಕೆ -ಸೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಏಪ್ರಿಲ್ 11 ರ ಭಾನುವಾರದಂದು ನಡೆಸಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್)ಯನ್ನು ಮುಂದೂಡಲಾಗಿದೆ.

ಏಪ್ರಿಲ್ 11 ರಂದು ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿತ್ತು. ಆದರೆ, ಕಾರಣಾಂತರದಿಂದ ಪರೀಕ್ಷೆ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು. ನೋಂದಾಯಿತ ಅಭ್ಯರ್ಥಿಗಳು ಪರೀಕ್ಷೆಗೆ ಸಂಬಂಧಿಸಿದಂತೆ ವೆಬ್ಸೈಟ್ನಲ್ಲಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಮೈಸೂರು ವಿವಿ ಕೆ ಸೆಟ್ ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ. ಹೆಚ್. ರಾಜಶೇಖರ್ ತಿಳಿಸಿದ್ದಾರೆ. 2020 -21 ನೇ ಸಾಲಿನಲ್ಲಿ 83 ಸಾವಿರ ಅಭ್ಯರ್ಥಿಗಳು ಕೆ –ಸೆಟ್ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...