ಬೆಂಗಳೂರು: ಇದೇ ಮೊದಲ ಬಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವತಿಯಿಂದ ಕೆ- ಸೆಟ್ ಪರೀಕ್ಷೆ ನಡೆಸಲಾಗುತ್ತದೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್) ನವೆಂಬರ್ 5 ರಂದು ನಡೆಸಲು ದಿನಾಂಕ ನಿಗದಿಪಡಿಸಿದ್ದು ಸೆಪ್ಟೆಂಬರ್ 30ರವರೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಮೈಸೂರು ವಿವಿ ಇದುವರೆಗೆ ಕೆ-ಸೆಟ್ ಪರೀಕ್ಷೆ ನಡೆಸುತ್ತಿತ್ತು. ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ -ಸೆಟ್ ನಡೆಸುತ್ತಿದೆ. ಸೆಪ್ಟೆಂಬರ್ 5ರಂದು ಅಧಿ ಸೂಚನೆ ಹೊರಡಿಸಲಾಗುವುದು. ಅದೇ ದಿನ ಪುಸ್ತಕವನ್ನು ಕೂಡ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.
ಸೆ. 10 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಸೆಪ್ಟೆಂಬರ್ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲಾಗಿದೆ. ಅಕ್ಟೋಬರ್ 3 ಶುಲ್ಕ ಪಾವತಿಗೆ ಕೊನೆಯ ದಿನವಾಗಿದ್ದು, ನವೆಂಬರ್ 5 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದೆ.