alex Certify ಇಂದಿನಿಂದ ಶಾಲೆಗಳಲ್ಲಿ 1 -15 ವರ್ಷದ ಮಕ್ಕಳಿಗೆ ಜೆಇ ಮೆದುಳು ಜ್ವರ ನಿಯಂತ್ರಣ ಲಸಿಕೆ ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದಿನಿಂದ ಶಾಲೆಗಳಲ್ಲಿ 1 -15 ವರ್ಷದ ಮಕ್ಕಳಿಗೆ ಜೆಇ ಮೆದುಳು ಜ್ವರ ನಿಯಂತ್ರಣ ಲಸಿಕೆ ಅಭಿಯಾನ

ಬೆಂಗಳೂರು: ಇಂದಿನಿಂದ 1 ರಿಂದ 15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ವಾರದಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ, ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಸಂಸ್ಥೆಗಳು, ಅಂಗನವಾಡಿ, ಇನ್ನಿತರ ಪ್ರದೇಶಗಳಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪ್ಲೇವಿ ವೈರಸ್ ಎಂಬ ವೈರಾಣುವಿನಿಂದ ಬರುವ ಜೆಇ ಮೆದುಳು ಜ್ವರ ಕ್ಯುಲೆಕ್ಸ್ ಸೊಳ್ಳೆಗಳ ಮೂಲಕ ಹರಡುತ್ತದೆ. ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟುಮಾಡುವ ಜೆಇ ಮೆದುಳು ಜ್ವರ(ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ವಿಶೇಷ ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ.

ಡಿಸೆಂಬರ್ ಮೊದಲ ವಾರದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದ್ದು, ನಂತರ ಆರೋಗ್ಯ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು, ಇನ್ನಿತರೆ ಪ್ರದೇಶಗಳಲ್ಲಿ ವ್ಯವಸ್ಥೆ ಮಾಡಲಾಗುವುದು.

ಕೇಂದ್ರ ಸರ್ಕಾರ ಉಚಿತವಾಗಿ ಜೆನವ್ಯಾಕ್ ಜೆಇ ಲಸಿಕೆಗಳನ್ನು ಸರಬರಾಜು ಮಾಡಿದೆ. ಪ್ಲೇವಿ ಎಂಬ ವೈರಾಣುವಿನಿಂದ ಜೆಇ ಮೆದುಳು ಜ್ವರ ಬರುತ್ತದೆ. ಭಾರತ ಸೇರಿದಂತೆ ಏಷ್ಯಾದ 11 ರಾಷ್ಟ್ರಗಳು ಹಾಗೂ ವಿಶ್ವದ 24 ರಾಷ್ಟ್ರಗಳಲ್ಲಿ ಜಪಾನೀಸ್ ಎನ್ ಸೆಫಲೈಟಿಸ್ ಪಿಡುಗು ಇದೆ ಎಂದು ಗುರುತಿಸಲಾಗಿದೆ.

ಪ್ರತಿವರ್ಷ 68,000 ಪ್ರಕರಣ ವರದಿಯಾಗುತ್ತಿದ್ದು, ಶೇಕಡ 20 ರಿಂದ 30ರಷ್ಟು ಮರಣ ಪ್ರಮಾಣವಿದೆ. ಗುಣಮುಖರಾದ ಶೇಕಡ 30 ರಿಂದ 50ರಷ್ಟು ಪ್ರಕರಣದಲ್ಲಿ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಕಂಡುಬಂದಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಲಸಿಕಾಕರಣಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...