ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ ಗುತ್ತಿಗೆ ನೌಕರರ ಭೇಟಿಯಾಗಿ ಚರ್ಚೆ ನಡೆಸಿದ ಅವರು ಮಾತನಾಡಿ, ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಆರೋಗ್ಯ ವಿಮೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ವೇತನ ಹೆಚ್ಚಳಕ್ಕೆ ಪ್ರಯತ್ನಿಸಲಾಗಿದೆ ಎಂದು ತಿಳಿಸಿದ್ದಾರೆ.
ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ಕಾಯಂ ನೌಕರರಿಗೆ ನೀಡುವಷ್ಟೇ ವೇತನ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದು, ಈ ನೌಕರರು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ವ್ಯಾಪ್ತಿಗೆ ಬರುತ್ತಾರೆ. ರಾಜ್ಯ ಸರ್ಕಾರದದಿಂದಲೇ ಸಮಾನ ವೇತನ ಕೊಡಲು ಸಾಧ್ಯವಾಗುವುದಿಲ್ಲ. ಆದರೆ, ಈಗ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು. ಗುತ್ತಿಗೆ ನೌಕರರ ಸಾಧ್ಯವಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ.