
ಬೆಂಗಳೂರು: ಆಸ್ಪತ್ರೆಗಳಲ್ಲಿ ಸರದಿ ಸಾಲು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅನಗತ್ಯ ಕಾಯುವಿಕೆ ತಪ್ಪಿಸಲು ಕ್ಯೂಆರ್ ಕೋಡ್ ಮತ್ತು ಸ್ಕಿಪ್ ದಿ ಕ್ಯೂ ಪರಿಚಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಕ್ಯೂಆರ್ ಕೋಡ್ ಮತ್ತು ಸ್ಕಿಪ್ ದಿ ಕ್ಯೂ ಪರಿಚಯಿಸಿರುವುದರಿಂದ ರೋಗಿಗಳು ಸಾಲಿನಲ್ಲಿ ನಿಲ್ಲಬೇಕಿಲ್ಲ. ಆಸ್ಪತ್ರೆಗೆ ಭೇಟಿ ನೀಡಿದ ಕೂಡಲೇ ನೆರವು ನೀಡಲು ಈಗಾಗಲೇ 18 ಜಿಲ್ಲಾ ಆಸ್ಪತ್ರೆಗಳಲ್ಲಿ ಹೆಲ್ತ್ ಡೆಸ್ಕ್ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಆಸ್ಪತ್ರೆಗಳಲ್ಲಿ ವೈದ್ಯರ ಸಮಾಲೋಚನೆಗಾಗಿ ರೋಗಿಗಳು ಕಾಯುವ ಸಮಯ ಗಣನೀಯವಾಗಿ ಕಡಿಮೆಯಾಗಿದೆ. ಹೊರರೋಗಿಗಳು ಶೀಘ್ರವಾಗಿ ವೈದ್ಯರ ಸಲಹೆ ಪಡೆದುಕೊಳ್ಳಲು ಸಹಕಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.