alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಸ್ಥಾಪನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಸ್ಥಾಪನೆ

ಬೆಂಗಳೂರು: ಡಿಸೆಂಬರ್ ಒಳಗೆ ರಾಜ್ಯಾದ್ಯಂತ ‘ನಮ್ಮ ಕ್ಲಿನಿಕ್’ ಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 243 ಸೇರಿದಂತೆ ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್ ಗಳನ್ನು ನವೆಂಬರ್ ಅಂತ್ಯ ಇಲ್ಲವೇ ಡಿಸೆಂಬರ್ 15ರ ವೇಳೆಗೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಿರ್ಮಿಸಿದ ನಮ್ಮ ಕಿನಿಕ್ ಮಾದರಿ ವೀಕ್ಷಿಸಿ ಮಾತನಾಡಿದ ಅವರು, ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ಯೋಜನೆ ರೂಪಿಸಿದ್ದು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ರೀತಿಯಲ್ಲಿ ಇವು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ನಮ್ಮ ಕ್ಲಿನಿಕ್ ಗಳಲ್ಲಿ ವೈದ್ಯ, ನರ್ಸ್, ಲ್ಯಾಬ್ ಟೆಕ್ನಿಷಿಯನ್, ಡಿ ಗ್ರೂಪ್ ಒಬ್ಬ ಸಿಬ್ಬಂದಿ ಇರುತ್ತಾರೆ. ಜನರಿಗೆ ಆರೋಗ್ಯ ಮತ್ತು ಸರ್ಕಾರಿ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಹೆಚ್ಚಾಗಲಿದೆ. ಬೆಂಗಳೂರು ವ್ಯಾಪ್ತಿಯ ಕ್ಲಿನಿಕ್ ಗಳಿಗೆ ವೈದ್ಯರ ನೇಮಕ ಆಗಿದ್ದು, ಉಳಿದ ವೈದ್ಯರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...