
ಬೆಂಗಳೂರು: ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರನ್ನು ರಾಜಮಂಡ್ರಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.
ತೆಲುಗು ಭಾಷೆಯ ಮೇಲೆ ಹಿಡಿತ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪ್ರಭಾವ ಹೊಂದಿರುವ ಸುಧಾಕರ್ ಅವರಿಗೆ ಈ ಹಿಂದೆ ಕೂಡ ಬಿಜೆಪಿ ವರಿಷ್ಠರು ಹೈದರಾಬಾದ್ ಮಹಾನಗರ ಪಾಲಿಕೆ ಮತ್ತು ತೆರಂಗಾಣ ವಿಧಾನಸಭೆ ಚುನಾವಣೆಗಳಲ್ಲಿ ಜವಾಬ್ದಾರಿ ನೀಡಿದ್ದರು.
ಈಗ ಆಂಧ್ರಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ, ಮಾಜಿ ಮುಖ್ಯಮಂತ್ರಿ ಎನ್ಟಿಆರ್ ಪುತ್ರಿ ಪುರಂದರೇಶ್ವರಿ ಸ್ಪರ್ಧಿಸುತ್ತಿರುವ ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್ ಅವರನ್ನು ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.