ಚಾಮರಾಜನಗರ: ಉತ್ತರಪ್ರದೇಶದ ಅಯೋಧ್ಯೆಯಿಂದ ಮಂತ್ರಾಕ್ಷತೆ ತಂದಿಲ್ಲ. ಈ ನನ್ ಮಕ್ಕಳು ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ಸಚಿವ ಕೆ. ವೆಂಕಟೇಶ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾವನಾತ್ಮಕ ವಿಚಾರ ಇಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ಅಯೋಧ್ಯೆಯಿಂದ ಮಂತ್ರಾಕ್ಷತೆ ಬಂದಿದ್ದು ಎಂದು ಸುಳ್ಳು ಹೇಳಿದ್ದಾರೆ. ಅನ್ನಭಾಗ್ಯದ ಅಕ್ಕಿಗೆ ಅರಿಶಿಣ ಮಿಕ್ಸ್ ಮಾಡಿ ಹಂಚಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.