ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕೆ.ಎ. ದಯಾನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ದಯಾನಂದ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಶ್ರೀನಿವಾಸ್ ಅಮಾನತುಗೊಂಡಿದ್ದರು. ಅಮಾನತುಗೊಳಿಸಿದ ಬಳಿಕ ಸರ್ಕಾರ ಹೊಸ ಜಿಲ್ಲಾಧಿಕಾರಿ ನೇಮಕ ಮಾಡಿರಲಿಲ್ಲ. ಕೆ.ಎ. ದಯಾನಂದ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಎರಡನೇ ಬಾರಿಗೆ ನೇಮಕವಾಗಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.