ಚಿಕ್ಕಮಗಳೂರು: ಪ್ರೀತಿಸಿ ಮದುವೆಯಾದ ಹುಡುಗಿ ಮೂರೇ ದಿನಕ್ಕೆ ಬಿಟ್ಟು ಹೋದಳೆಂದು ಮನನೊಂದ ರಾಷ್ಟ್ರೀಯ ಕಬಡ್ಡಿ ಆಟಗಾರನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರಿನ ತೇಗೂರು ಗ್ರಾಮದಲ್ಲಿ ನಡೆದಿದೆ.
ವಿನೋದ್ (24) ಆತ್ಮಹತ್ಯೆಗೆ ಶರಣಾದ ರಾಷ್ಟ್ರ ಮತ್ಟದ ಕಬಡ್ಡಿ ಆಟಗಾರ. ವಿನೋದ್ ಹಾಗೂ ತನುಜ ಕಳೆದ ನಾಲ್ಕು ವರ್ಷಗಳಿಮ್ದ ಪ್ರೀತಿಸುತ್ತಿದ್ದರು. ಮದುವೆಗೆ ಯುವತಿ ಮನೆಯವರು ಒಪ್ಪಿರಲಿಲ್ಲ. ಹಾಗಾಗಿ ಇಬ್ಬರೂ ಓಡಿ ಹೋಗಿ ಮೂರು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು. ಯುವತಿ ಕುಟುಂಬದವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಯುವತಿ ಮನೆಯವರ ದೂರಿನ ಮೇರೆಗೆ ಪೊಲೀಸರು ನವಜೋಡಿಯನ್ನು ಠಾಣೆಗೆ ಕರೆಸಿ ವಿಚಾರಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಯುವತಿ ತಾನು ತಾಯಿ ಮನೆಗೆ ಹೋಗುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಉಲ್ಟಾ ಹೊಡೆದ ಯುವತಿ ವಿನೋದ್ ನನ್ನು ಬಿಟ್ಟು ತಾಯಿ ಮನೆಗೆ ತೆರಳಿದ್ದಾಳೆ. ನಾಲ್ಕು ವರ್ಷಗಳ ಕಾಲ ಪ್ರೀತಿಸಿ ಮೂರು ದಿನಗಳ ಹಿಂದಷ್ಟೇ ವಿವಾಹವಾಗಿದ್ದು, ಈಗ ಪತ್ನಿ ಬಿಟ್ಟು ಹೋಗಿದ್ದರಿಂದ ಮನನೊಂದ ವಿನೋದ್ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾರೆ.