alex Certify SHOCKING: ಕಾಬೂಲ್ ಏರ್ ಪೋರ್ಟ್ ಮೇಲೆ ಮತ್ತೆ ಉಗ್ರರ ದಾಳಿ ಸಾಧ್ಯತೆ, ಜೋಬೈಡೆನ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಾಬೂಲ್ ಏರ್ ಪೋರ್ಟ್ ಮೇಲೆ ಮತ್ತೆ ಉಗ್ರರ ದಾಳಿ ಸಾಧ್ಯತೆ, ಜೋಬೈಡೆನ್ ಎಚ್ಚರಿಕೆ

ವಾಷಿಂಗ್ಟನ್: ಆಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಏರ್ಪೋರ್ಟ್ ಮೇಲೆ ಮತ್ತೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯಿದೆ.

24 ರಿಂದ 36ರ ಗಂಟೆಯೊಳಗೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಜೋಬೈಡೆನ್ ಎಚ್ಚರಿಕೆ ನೀಡಿದ್ದಾರೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ಭಯೋತ್ಪಾದಕರು ವಶಕ್ಕೆ ಪಡೆದುಕೊಂಡ ನಂತರ ಪರಿಸ್ಥಿತಿ ಹದಗೆಟ್ಟಿದ್ದು, ಸಾವಿರಾರು ಜನ ದೇಶ ತೊರೆಯಲು ಕಾಬೂಲ್ ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದಾರೆ.

ಅಮೆರಿಕ ಯೋಧರನ್ನು ಗುರಿಯಾಗಿಸಿಕೊಂಡು ಐಸಿಸ್ ಉಗ್ರರು ಇತ್ತೀಚೆಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ 100 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಈಗ ಮತ್ತೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿದ್ದು, ಮತ್ತೆ ದಾಳಿ ನಡೆಯುವ ಬಗ್ಗೆ ಜೋಬೈಡೆನ್ ಎಚ್ಚರಿಕೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...