
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಿರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ.
ರಾಮನಗರ ನಿವಾಸಿ ನಾಗೇಶ(27), ತೇಜಸ್ವಿನಿ(14) ಮೃತಪಟ್ಟವರು ಎಂದು ಹೇಳಲಾಗಿದೆ. ಕಾರ್ ನಲ್ಲಿದ್ದ ಮಗು ಸೇರಿದಂತೆ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.