
ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಾಲ್ವರು ಅಪ್ರಾಪ್ತ ಬಾಲಕರು ಸೇರಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಕಲಬುರಗಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನಿನ್ನೆ ಮಧ್ಯಾಹ್ನ ನಾಳ್ವರು ಅಪ್ರಾಪ್ತ ವಯಸ್ಸಿನ ಹುಡುಗರು ಬಾಲಕಿಯನ್ನು ಪುಸಲಾಯಿಸಿ ಮನೆ ಮೇಲಿನ ಮಹಡಿ ಮೇಲೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಘಟನೆಯಿಂದ ಅಸ್ವಸ್ಥಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕಿಯರು ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.