alex Certify BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ

ಕಲಬುರಗಿ: ಕಲಬುರಗಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಸನಾಪುರ ಬಳಿ ಬೈಕ್, ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಘವೇಂದ್ರ (35), ಮುಜಾಹಿದ್ (30) ಹುಸೇನ್ ಬಿ (45) ಮೌಲಾಬಿ (50) ಮೃತ ದುರ್ದೈವಿಗಳು. ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಲಾರಿಗೆ ಡಿಕ್ಕಿ ಹೊಡೆದು ಲಾರಿ ಚಕ್ರಕ್ಕೆ ಸಿಲುಕಿದೆ. ಈ ವೇಳೆ ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಹಾಗೂ ಬೈಕ್ ಸವಾರ ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...