alex Certify ಆಹ್ವಾನ ಪತ್ರಿಕೆ ಕೊಡಲು ಹೋಗುವಾಗಲೇ ಅಪಘಾತ: ಮದುಮಗ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಹ್ವಾನ ಪತ್ರಿಕೆ ಕೊಡಲು ಹೋಗುವಾಗಲೇ ಅಪಘಾತ: ಮದುಮಗ ಸಾವು

ಕಲಬುರ್ಗಿ: ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮದುಮಗ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

ದೇವೇಂದ್ರಪ್ಪ(30) ಮತ್ತು ಗುರುರಾಜ(30) ಮೃತಪಟ್ಟವರು ಎಂದು ಹೇಳಲಾಗಿದೆ. ಯಡ್ರಾಮಿ ತಾಲ್ಲೂಕು ಕೋಣಶಿರಸಗಿ ಗ್ರಾಮದ ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿದ್ದು, ಸಂಬಂಧಿಕರಿಗೆ ಆಹ್ವಾನ ಪತ್ರಿಕೆ ಕೊಡಲು ಗುರುರಾಜ ಅವರೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓವರ್ ಟೇಕ್ ಮಾಡಲು ಹೋದ ಕಾರ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...