alex Certify ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಸವಾರರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿದ್ದಾರೆ. ಆಕಾಶ್(21), ಶಿವು(21), ಲಕ್ಷ್ಮಣ್(18) ಮೃತಪಟ್ಟವರು ಎಂದು ಹೇಳಲಾಗಿದೆ.

ಜೇವರ್ಗಿ -ಶ್ರೀರಂಗಪಟ್ಟಣ ಹೆದ್ದಾರಿಯ ಕಟ್ಟಿಸಂಗಾವಿ ಸೇತುವೆ ಸಮೀಪ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಮೃತಪಟ್ಟವರು ಜೇವರ್ಗಿ ತಾಲೂಕಿನ ಹಿಪ್ಪರಗಾ ನಿವಾಸಿಗಳು. ಚಿತ್ತಾಪುರ ತಾಲೂಕಿನ ನಾಗಾವಿ ಯಲ್ಲಮ್ಮ ದೇವಾಲಯಕ್ಕೆ ತೆರಳಿ, ವಾಪಸ್ ಊರಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಕಲಬುರ್ಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...