ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದು, ರ್ಯಾಲಿ ಅರ್ಧಕ್ಕೆ ತಡೆದ ಪೊಲೀಸರು ಬಿಜೆಪಿ ನಯಕರನ್ನು ವಶಕ್ಕೆ ಪಡೆದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಕಲಬುರಗಿ ಜಗತ್ ಸರ್ಕಲ್ ನಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕಲೆಂದು ಅವರ ನಿವಾಸವಿರುವ ಐವಾನ್-ಇ-ಶಾಹಿ ಪ್ರದೇಶದತ್ತ ಧಾವಿಸಿದ್ದಾರೆ.
ಈ ವೇಳೆ ಪೊಲೀಸರು ಬಿಜೆಪಿ ಪ್ರತಿಭಟನಾ ರ್ಯಾಲಿಯನ್ನು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಬಳಿ ತಡೆದಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಸಚಿವರ ಮನೆಯತ್ತ ಮುನ್ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಆದರೆ ಪ್ರತಿಭಟನಾಕಾರರನ್ನು ತಡೆದು ನಿಲ್ಲಿಸಿದ ಪೊಲೀಸರು, ಬಿಜೆಪಿ ನಾಯಕರಾದ ಸಿ.ಟಿ.ರವಿ.ಛಲವಾದಿ ನಾರಾಯಣಸ್ವಾಮೀ ಸೇರಿದಂತೆ ನೂರಾರು ನಾಯಕರನ್ನು ವಶಕ್ಕೆ ಪಡೆದು ವಾಹನದಲ್ಲಿ ತುಂಬಿ ಕರೆದೊಯ್ದಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನಾ ರ್ಯಾಲಿ ಕಲಬುರಗಿ ಬಿಜೆಪಿ ಕಚೇರಿ ಬಳಿಯೇ ಅರ್ಧಕ್ಕೆ ನಿಂತಿದೆ. ಸಚಿವರ ಮನೆಗೆ ಮುತ್ತಿಗೆ ಹಾಕುವ ಬಿಜೆಪಿ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.