ಕಲಬುರಗಿ: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆಹಾಕುವ ನಿಟ್ಟಿನಲ್ಲಿ ತೆರಳಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿ ಕಲಬುರಗಿ ಜಗತ್ ಸರ್ಕಲ್ ನಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ನಿವಾಸವಿರುವ ಐವಾನ್-ಇ-ಶಾಹಿ ಪ್ರದೇಶದತ್ತ ಧಾವಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ಬಿಜೆಪಿ ಪ್ರತಿಭಟನಾ ರ್ಯಾಲಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸವನ್ನು ತಲುಪಲಿದ್ದು, ಸಚಿವರ ನಿವಾಸ ಮುತ್ತಿಗೆ ಹಾಕುವ ಯತ್ನ ನಡೆಯಲಿದೆ.
ಮುಂಜಾಗೃತಾ ಕ್ರಮವಾಗಿ ಸಚಿವ ಪ್ರಿಯಾಂಕ್ ಖರ್ಗೆ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಬಿಜೆಪಿ ಮುತ್ತಿಗೆ ಯತ್ನವನ್ನು ಡಿಸಿ ಕಚೇರಿ ಬಳಿಯೇ ತಡೆಯುವ ನಿಟ್ಟಿನಲ್ಲಿ ಪೊಲೀಸರು ಸಜ್ಜಾಗಿದ್ದಾರೆ.