ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.
ವೀರ್ ಜಲಾಶಯದಿಂದ 1.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನದಿ ಪ್ರವಾಹದಿಂದ ಘತ್ತರಗಾ ಸೇತುವೆ ಮುಳುಗಡೆಯಾಗಿದೆ. ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಘತ್ತರಗಾ ಸೇತುವೆ ಮುಳುಗಡೆಯಾಗಿ ಕಲಬುರ್ಗಿ -ವಿಜಯಪುರ ಸಂಪರ್ಕ ಕಡಿತವಾಗಿದೆ.
ಅಫಜಲಪುರ ತಾಲೂಕಿನ ಮಣ್ಣೂರಿನ ಭೀಮಾ ನದಿ ದಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಮುಳುಗಡೆಯಾಗಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಭೀಮಾ ನದಿ ಆರ್ಭಟಿಸುತ್ತಿದ್ದು, ನದಿ ಪ್ರವಾಹಕ್ಕೆ ಮಣ್ಣೂರಿನ ಯಲ್ಲಮ್ಮ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯೂ ಜಲಾವೃತಗೊಂಡಿದೆ.