ಬೆಂಗಳೂರು : ಕಲಬುರಗಿ ಕಾನ್ಸ್ ಟೇಬಲ್ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು ನಮಗೂ ಸತ್ಯಾಂಶ ಹೊರಬರಬೇಕು ಎಂಬ ಆಸೆ ಇದೆ. ಹೀಗಾಗಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವುದಾಗಿ ಹೇಳಿದರು. ಅದೇ ರೀತಿ ಟ್ರ್ಯಾಕ್ಟರ್ ಮಾಲೀಕನಿಗೆ ಗುಂಡೇಟು ಹೊಡೆದ ಪ್ರಕರಣವನ್ನುಕೂಡ ಸಿಐಡಿ ತನಿಖೆಗೆ ಒಪ್ಪಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ಅಕ್ರಮ ಮರಳು ಸಾಗಾಟ ತಡೆಯಲು ಹೋದ ಹೆಡ್ ಕಾನ್ಸ್ಟೇಬಲ್ ರನ್ನು ಮೈಸೂರ್ ಚವಾಣ್ ಅವರನ್ನು ಟ್ರ್ಯಾಕ್ಟರ್ ಹರಿಸಿ ಹತ್ಯೆ ಮಾಡಲಾಗಿತ್ತು. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನಾರಾಯಣಪುರ ಸಮೀಪ ಘಟನೆ ನಡೆದಿದೆ. ಅಕ್ರಮ ಮರಳು ಸಾಗಾಟ ಹಿನ್ನೆಲೆಯಲ್ಲಿ ಮೈಸೂರ್ ಚವಾಣ್ ತಪಾಸಣೆಗೆ ಹೋಗಿದ್ದರು. ಈ ವೇಳೆ ಅವರ ಮೇಲೆ ದುಷ್ಕರ್ಮಿಗಳು ಟ್ರ್ಯಾಕ್ಟರ್ ಹರಿಸಿದ್ದರು. .ಟ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೈಸೂರು ಚವಾಣ್ ಸ್ಥಳದಲ್ಲೇ ಮೃತಪಟ್ಟಿದ್ದರು.