ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 219 ಪೌರಕಾರ್ಮಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಯೋಜನಾ ನಿರ್ದೇಶಕರು ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ಜಿಲ್ಲಾಧಿಕಾರಿಗಳು ಕಲಬುರಗಿ ಕಚೇರಿಯಿಂದ ಅಥವಾ ಆಯುಕ್ತರು ಮಹಾನಗರ ಪಾಲಿಕೆ ಕಲಬುರಗಿ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿ ನಮೂನೆಯಲ್ಲಿನ ಎಲ್ಲಾ ಖಾಲಂ ಭರ್ತಿ ಮಾಡಿ ಅರ್ಜಿಯ ಜೊತೆಗೆ ಸೂಕ್ತ ದೃಢೀಕೃತ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ಏಪ್ರಿಲ್ 21, 2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ತಲುಪಿಸಬೇಕಿದೆ.
ವಿಳಾಸ: ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಕಲಬುರಗಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಮೊದಲನೇ ಮಹಡಿ, ಕೊಠಡಿ ಸಂಖ್ಯೆ II, ಮಿನಿ ವಿಧಾನ ಸೌಧ, ಕಲಬುರಗಿ 585 102 ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಲಾಗಿದೆ.