ಕಲಬುರಗಿ: ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿರುತ್ತದೆ.
ಕಲಬುರ್ಗಿಗೆ ಬರುವವರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕಿದೆ. ಕಲಬುರ್ಗಿ ಜಿಲ್ಲೆಯ ಐದು ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸಲಿದ್ದಾರೆ. ಆಳಂದ ತಾಲೂಕು, ಅಫ್ಜಲ್ ಪುರ ತಾಲೂಕಿನ ಗಡಿಗಳಲ್ಲಿ ಪೊಲೀಸರು ತಪಾಸಣೆ ನಡೆಸಲಿದ್ದಾರೆ.
ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಾಗಿರುವ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ರಾಜ್ಯಕ್ಕೆ ಬರುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದೆ ಎನ್ನಲಾಗಿದೆ.