alex Certify ಕಲಬುರಗಿ ಜಿಲ್ಲೆಯಾದ್ಯಂತ ಮುಂದಿನ ಒಂದು ವಾರ ಮಳೆ : ನದಿ ದಂಡೆ ಹೋಗದಂತೆ ಜಿಲ್ಲಾಧಿಕಾರಿ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿ ಜಿಲ್ಲೆಯಾದ್ಯಂತ ಮುಂದಿನ ಒಂದು ವಾರ ಮಳೆ : ನದಿ ದಂಡೆ ಹೋಗದಂತೆ ಜಿಲ್ಲಾಧಿಕಾರಿ ಮನವಿ

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಕ ಕಳೆದೆರಡು ದಿನಗಳಿಂದ ಸತತ ಮಳೆ ಸುರಿಯುತ್ತಿದೆ. ಮುಂದಿನ ಒಂದು ವಾರ ನಿರಂತರ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ‌ ನೀಡಿದೆ. ಹೀಗಾಗಿ ಜಿಲ್ಲೆಯ ನದಿ, ಹಳ್ಳ, ಕೆರೆ ದಂಡೆಗೆ ಸಾರ್ವಜನಿಕರು ಹೋಗದಂತೆ ‌ಡಿ.ಸಿ. ಬಿ.ಫೌಜಿಯಾ ತರನ್ನುಮ್‌ ಅವರು ಮನವಿ ಮಾಡಿದ್ದಾರೆ.

ಇನ್ನು ನದಿ ದಂಡೆಗೆ ಜಾನುವಾರುಗಳನ್ನು ಬಿಡಬಾರದು. ದಡದ ಬಳಿ ಬಟ್ಟೆ ಸ್ವಚ್ಛಗೊಳಿಸುವುದು, ಈಜಾಡುವುದನ್ನು ಮಾಡಬಾರದು. ಅಪಾಯವಿರುವ ಸೇತುವೆಗಳ ಮೇಲೆ‌ ಸಂಚರಿಸಬಾರದು ಎಂದು ತಿಳಿಸಿರುವ ಅವರು ನದಿ ದಂಡೆಯಲ್ಲಿ ಬರುವ ದೇವಸ್ಥಾನ, ಮಸೀದಿ, ಪ್ರಾರ್ಥನಾ ಮಂದಿರದಲ್ಲಿ ಪೂಜೆ  ಸಲ್ಲಿಸುವವರನ್ನು ನದಿ ದಂಡೆಗೆ ಹೋಗದಂತೆ ಮನವಿ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಪ್ರವಾಹ ಕುರಿತು ಡಂಗುರ ಸಾರಿಸಿ ಸಾರ್ವಜನಿಕರಲ್ಲಿ ಪ್ರಚೂರಪಡಿಸುವಂತೆ ಅವರು ತಿಳಿಸಿದ್ದಾರೆ.

ಭಾರಿ ಮಳೆಯಿಂದ ಉಂಟಾಗುವ‌ ನೆರೆ ಪರಿಸ್ಥಿತಿಯನ್ನು ನಿಯಂತ್ರಣ ಮತ್ತು ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆಯನ್ನು ವಹಿಸಬೇಕಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಮತ್ತು ಪ್ರತಿದಿನ ದಿನದ ನೆರೆ ಹಾನಿ ವರದಿಯನ್ನು ಸಲ್ಲಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ನಗರ ಮತ್ತು ಗ್ರಾಮೀಣ ಪ್ರದೇಶದ ತಗ್ಗು ಪ್ರದೇಶಗಳಲ್ಲಿರುವ ಜನರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಗೆ ಸ್ಥಳಾಂತರಿಸುವುದು, ಅವಶ್ಯಕವೆನಿಸಿದರೆ ಮಾತ್ರ ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವ ಜಿಲ್ಲಾಧಿಕಾರಿಗಳು, ಮಳೆಯಿಂದ ಅಪಾಯವಿರುವ ಮನೆ, ಶಾಲೆ ಹಾಗೂ ಇತರೆ ಕಟ್ಟಡಗಳ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸುರಕ್ಷಾ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ವಿಪತ್ತು ಕಾರ್ಯ ನಿರ್ಲಕ್ಷಿಸುವಂತಿಲ್ಲ:

ಪ್ರವಾಹ, ನೆರೆ ಹಾವಳಿ ಸಂದರ್ಭದಲ್ಲಿ ವಿಪತ್ತು‌ ಕಾರ್ಯ ತುರ್ತಾಗಿ ಕೈಗೊಳ್ಳಬೇಕು. ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದಿರುವ ಜಿಲ್ಲಾ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯಾಗಿರುವ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು, ನಿರ್ಲಕ್ಷ್ಯ ವಹಿಸುವಂತಹ ಅಧಿಕಾರಿ-ಸಿಬ್ಬಂದಿಗಳ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ-2005ರಂತೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸೆಲ್ಫಿ, ಪೋಟೋ ಶೂಟ್ ಬೇಡ;

ಮಳೆಯಿಂದ ಸಹಜವಾಗಿ ನದಿ, ಕೆರೆ, ಹಳ್ೞಗಳು ತುಂಬಿ ರಮಣೀಯ ದೃಶ್ಯ ನೋಡುಗರನ್ನು ಸೆಳೆಯುತ್ತದೆ. ಆದರೆ ಮಳೆ‌ ನಿರಂತರ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರವಾಸಿ ತಾಣಗಳಲ್ಲಿ ಸೆಲ್ಫಿ, ಫೋಟೊಶೂಟ್ ಮಾಡಬಾರದೆಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...