
ಕಲಬುರ್ಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.40 ರ ಸುಮಾರಿಗೆ ಎರಡು ಸಲ ಭೂಮಿ ಕಂಪಿಸಿದ ಅನುಭವವಾಗಿದೆ.
ಕಂಪನದಿಂದ ಆತಂಕಗೊಂಡ ಜನ ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಗಡಿಕೇಶ್ವರ ಗ್ರಾಮದಲ್ಲಿ ನಿನ್ನೆಯೂ ಕೂಡ ಭೂಕಂಪ ಸಂಭವಿಸಿತ್ತು.
ವಿಜಯಪುರ ಜಿಲ್ಲೆಯ ಹಲವೆಡೆ ನಿನ್ನೆ ಭೂಕಂಪನವಾಗಿದ್ದು, ಪದೇ ಪದೇ ಕಂಪನದಿಂದ ಜನರಲ್ಲಿ ಆತಂಕ ಮೂಡಿದೆ ಎನ್ನಲಾಗಿದೆ.