alex Certify ಗಾಂಜಾ ಸಾಗಿಸುತ್ತಿದ್ದವರ ಮೇಲೆ ಫೈರಿಂಗ್: ಬರೋಬ್ಬರಿ 300 ಕೆಜಿ ಗಾಂಜಾ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಾಂಜಾ ಸಾಗಿಸುತ್ತಿದ್ದವರ ಮೇಲೆ ಫೈರಿಂಗ್: ಬರೋಬ್ಬರಿ 300 ಕೆಜಿ ಗಾಂಜಾ ವಶಕ್ಕೆ

ಕಲಬುರ್ಗಿಯ ಸ್ವಾಮಿ ಸಮರ್ಥ ದೇವಾಲಯದ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಮೇಲೆ ಫೈರಿಂಗ್ ಮಾಡಲಾಗಿದೆ.

ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲು ರೌಡಿ ನಿಗ್ರಹ ದಳ ತೆರಳಿದೆ. ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಆರೋಪಿಗಳು ಯತ್ನಿಸಿದ್ದಾರೆ. ಶರಣಾಗುವಂತೆ ತಿಳಿಸಿದರೂ ಕೇಳದ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆಸಲಾಗಿದೆ.

34 ವರ್ಷದ ಭೀಮ ಕಾಲಿಗೆ ಪಿಎಸ್ಐ ವಾಹಿದ್ ಕೊತ್ವಾಲ್ ಫೈರಿಂಗ್ ಮಾಡಿದ್ದಾರೆ. ಆರೋಪಿ ಭೀಮ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 300 ಕೆಜಿಗೂ ಹೆಚ್ಚು ಗಾಂಜಾ ವಶಕ್ಕೆ ಪಡೆಯಲಾಗಿದೆ. ಗಾಯಾಳು ಭೀಮನನ್ನು ಕಲಬುರ್ಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...