
ಕಲಬುರಗಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿ ಹೊರವಲಯದ ಝಾಪುರ ಗುಡ್ಡದ ಬಳಿ ಫೈರಿಂಗ್ ಮಾಡಲಾಗಿದೆ.
ಇಮ್ತಿಯಾಜ್ ಗಿಣಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಪನಗರ ಠಾಣೆ ಪಿಎಸ್ಐ ಬಸವರಾಜ್ ಫೈರಿಂಗ್ ಮಾಡಿದ್ದಾರೆ. ದರೋಡೆಯ ಬಗ್ಗೆ ಮಾಹಿತಿ ತಿಳಿದು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ 6 ಕೇಸುಗಳಿವೆ. ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.