
ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿಗೆ ವೈದ್ಯನಿಂದ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಮೂರು ತಿಂಗಳಿನಿಂದ ಕಿರುಕುಳ ನೀಡಿದ ಆರೋಪದ ಮೇಲೆ ದೂರು ನೀಡಲಾಗಿದೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಗ್ರಾಮದ ವೈದ್ಯಾಧಿಕಾರಿ ವಿರುದ್ಧ ಆರೋಪ ಮಾಡಲಾಗಿದೆ. ಸಹಿ ಮಾಡಲು ಕೊಠಡಿಗೆ ತೆರಳಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದಾಗಿ ಮಾದನಹಿಪ್ಪಗಾ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.