ಕಲಬುರಗಿ: ಕಲ್ಬುರ್ಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯನ್ನು ಮುಂದೂಡಲಾಗಿದೆ. ಕಾಂಗ್ರೆಸ್ ಅರ್ಜಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಹೈಕೋರ್ಟ್ ಆದೇಶದಿಂದ ಬಿಜೆಪಿ ನಾಯಕರಿಗೆ ಹಿನ್ನಡೆಯಾಗಿದೆ. ಹಳೆ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿದೆ. 63 ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಲು ಆದೇಶ ಹೊರಡಿಸಿದೆ. ಕಲ್ಬುರ್ಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಕಾಂಗ್ರೆಸ್ ಅರ್ಜಿಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಹಳೆ ಮೀಸಲಾತಿಯನ್ನು ಪರಿಗಣಿಸಲು ಹೈಕೋರ್ಟ್ ಸೂಚನೆ ನೀಡಿದೆ. ಮೀಸಲಾತಿ ಬದಲಾವಣೆಯನ್ನು ಕಾಂಗ್ರೆಸ್ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಂಗ್ರೆಸ್ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ ಪೀಠ ಪುರಸ್ಕರಿಸಿದೆ. ತಿಂಗಳೊಳಗೆ ಚುನಾವಣೆ ನಡೆಸಲು ಸೂಚನೆ ನೀಡಿದೆ. ನವೆಂಬರ್ ಮತದಾರರ ಪಟ್ಟಿಯಂತೆ ಚುನಾವಣೆ ನಡೆಸಬೇಕು. ಮತದಾರರ ಪಟ್ಟಿಯಲ್ಲಿ 63 ಜನ ಮತದಾರರು ಇದ್ದರು. ಸಾಮಾನ್ಯ ಮಹಿಳೆ ಕೆಟಗರಿ ಮೇಲೆ ಚುನಾವಣೆಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.