
ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.
ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಜೋರಾಗಿ ಕಿರುಚಾಡಿದ್ದರಿಂದ ಪರಾರಿಯಾಗಿದ್ದ. ಆಸ್ಪತ್ರೆ ಸಿಬ್ಬಂದಿ ಆತನನ್ನು ಹಿಡಿಯಲು ಸಾಧ್ಯವಾಗಿರಲಿಲ್ಲ. ಕಲಬುರ್ಗಿಯ ಫಿಲ್ಟರ್ ಶೆಡ್ ನಿವಾಸಿ ಪ್ರೇಮ್ ಕುಮಾರ್(25) ಇಂತಹ ಕೃತ್ಯವೆಸಗಿದ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಕೊರೋನಾ ಸೋಂಕಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.