
ಕಲಬುರಗಿ: ಲಂಚ ಪಡೆಯುತ್ತಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ವಾರ್ಡನ್ ಶಿವಶರಣಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ.
ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅಡುಗೆ ಸಹಾಯಕ ಶ್ರೀಮಂತ ಅವರ ಬಳಿ 20,000 ರೂ. ಲಂಚ ಕೇಳಿದ್ದರು. ಕಚೇರಿಯಲ್ಲಿ 15,000 ರೂ. ಮುಂಗಡ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣ ಪಡೆಯುವಾಗಲೇ ತಡರಾತ್ರಿ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.